ರಾಷ್ಟ್ರೀಯ

ಕರ್ನಾಟಕ, ಮಹಾರಾಷ್ಟ್ರದಲ್ಲಿ ‘ಮತಗಳ್ಳತನ’ ರಾಹುಲ್‌ ಗಾಂಧಿಯಿಂದ ದಾಖಲೆ ಬಿಡುಗಡೆ


ನವದೆಹಲಿ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ,  ಆ.7ರಂದು ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಮತಗಳ್ಳತನದ ವಿರುದ್ಧ ಶುಕ್ರವಾರ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಮತಗಳ್ಳತನದ ಸ್ಫೋಟಕ ದಾಖಲೆಯನ್ನು ರಾಹುಲ್‌ ಗಾಂಧಿ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.



ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಹಿರಂಗಪಡಿಸಿದ ರಾಹುಲ್ ಗಾಂಧಿ ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಗಂಭೀರ ಆರೋಪ ಮಾಡಿದರು.
ಕರ್ನಾಟಕದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ.


ನಮ್ಮ ಪಕ್ಷವು ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೀರ್ಘಕಾಲದಿಂದ ಶಂಕಿಸಿತ್ತು ಮತ್ತು ಅಂತಿಮ ಫಲಿತಾಂಶ ಅವರ ಕೆಟ್ಟ ಭಯವನ್ನು ದೃಢಪಡಿಸಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿಯವರ ಸ್ಪೋಟಕ ದಾಖಲೆ ಬಿಡುಗಡೆ ದೇಶದಲ್ಲಿ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ.

Leave a Reply

Your email address will not be published. Required fields are marked *

error: Content is protected !!