ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದಲ್ಲಿ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವಸಂತ ಗಿಳಿಯಾರ್ ಎಂಬವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ ಎಂಬವರು ತನ್ನ ಮೊಬೈಲ್ ಪರಿಶೀಲಿಸುತ್ತಿದ್ದಾಗ, ವಸಂತ ಗಿಳಿಯಾರ್ ಎಂಬ ವ್ಯಕ್ತಿಯು, ಆತನ ಪೇಸ್ ಬುಕ್ ಖಾತೆಯಲ್ಲಿ, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದ್ದು, ಇದರಿಂದಾಗಿ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣೆಯಲ್ಲಿ ಅಕ್ರ : 84/2025 ಕಲಂ. 196 (1) (ಎ) 353(2) ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಾಗಿದೆ.