ಕರಾವಳಿರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕೈ  ಹಿಡಿದ ಗ್ಯಾರಂಟಿ

ಕಡಬ ಪಟ್ಟಣ ಪಂಚಾಯತ್ ಗೆ ನಡೆದ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 13 ಸ್ಥಾನಗಳ ಪೈಕಿ ಕಾಂಗ್ರೆಸ್ ಎಂಟು ಹಾಗೂ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ. ಆ ಮೂಲಕ ಕಡಬ ಪಟ್ಟಣ ಪಂಚಾಯತ್  ಕಾಂಗ್ರೆಸ್ ಪಾಲಾಗಿದೆ.

ಕಾಂಗ್ರೆಸ್ ಗೆಲುವಿಗೆ ರಾಜ್ಯ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದ್ದು ಈ ಬಗ್ಗೆ ಕಡಬದ ಕಾಂಗ್ರೆಸ್ ಮುಖಂಡರೂ ಕೂಡಾ ಅದನ್ನೇ ಒತ್ತಿ ಹೇಳುತ್ತಿದ್ದಾರೆ.

ಕಾಂಗ್ರೆಸ್ ಗೆಲುವಿನ ಬಳಿಕ ಕಡಬ ತಾಲೂಕು ಆಡಳಿತ ಸೌಧದ ಬಳಿಯಿಂದ ಕಡಬ ಪೇಟೆ ವರೆಗೆ ವಿಜಯೋತ್ಸವ ಜಾಥಾ ನಡೆಯಿತು. ವಿಜೇತ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!