ಮಹೇಶ್ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ: ಡಿಕೆಶಿ
ಬೆಂಗಳೂರು: ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಆರೆಸ್ಸೆಸ್ ಬಿ.ಎಲ್.ಸಂತೋಷ್ ವಿರುದ್ದ ಅವಹೇಳನಕಕಾರಿಯಾಗಿ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒದ್ದು ಒಳಗೆ ಹಾಕಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ”ಬಿ.ಎಲ್. ಸಂತೋಷ್ ವಿರುದ್ಧ ಆರೋಪ ಮಾಡಲು ತಿಮರೋಡಿ ಬಳಿ ಏನು ದಾಖಲೆ ಇದೆ ಎಂದು ಪ್ರಶ್ನಿಸಿದ ಡಿಕೆಶಿ ನಮ್ಮ ನಡುವೆ ರಾಜಕೀಯ ಭಿನ್ನಾಭಿಪ್ರಾಯವಿದೆ ಆದರೆ ನಮ್ಮ ವಿರೋಧಿಗಳ ಬಗ್ಗೆ ಏನೇನೋ ನೋ ಮಾತನಾಡುತ್ತಾರೆಂದು ನಾವು ಎಂದೂ ಖುಷಿಪಡುವುದಿಲ್ಲ” ಇಂದು ಅವರ ಬಗ್ಗೆ ನಾಳೆ ನಮ್ಮ ಬಗ್ಗೆಯೂ ಮಾತಾಡ್ತಾರೆ ಎಂದು ತಿಳಿಸಿದರು.