ಬೂಕರ್ ಪುರಸ್ಕೃತೆ ಬಾನು ಮುಷಾಕ್ರಿಂದ ಮೈಸೂರು ದಸರಾ ಉದ್ಘಾಟನೆ-ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಸ್ತಾಕ್ ಅವರು ಈ ಬಾರಿ ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೇಖಕಿ ಬಾನು ಮುಸ್ತಾಕ್ ಅವರ ಕೃತಿ ‘ಎದೆಯ ಹಣತೆ’ಗೆ ಪ್ರತಿಷ್ಠಿತ ಅಂತರ್ ರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಅತ್ಯಂತ ಸಂತಸದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.