ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ 10 ದಿನ ಎಸ್ಐಟಿ ಕಸ್ಟಡಿಗೆ
ಮಂಗಳೂರು: ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಒಪ್ಪಿಸಿ ಬೆಳ್ತಂಗಡಿಯ ನ್ಯಾಯಾಲಯ ಶನಿವಾರ ಆದೇಶಿಸಿದೆ.

ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂದಿನಿಂದ ಹತ್ತು ದಿನಗಳ ಕಾಲ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನ ವಿಚಾರಣೆ ನಡೆಸಲಿದ್ದಾರೆ.