ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಪೊಲೀಸರು ಮತ್ತೆ ನ್ಯಾಯಾಲಯಕ್ಕ್ ಹಾಜರು ಪಡಿಸಿದ್ದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲಾಗಿತ್ತು.