ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ-ನಿಖಿಲ್
ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ನಿಜ. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜೆಡಿಎಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ತಮ್ಮ ಕೊನೆಯ ಉಸಿರು ಇರುವವರೆಗೂ ರಾಜ್ಯದ ಸೇವೆಗೆ ತಮ್ಮ ಬದುಕನ್ನು ಮುಡುಪಿಟ್ಟಿದ್ದಾರೆ. ರಾಜ್ಯದ ಜನತೆ ದೇವೇಗೌಡ ಕುಟುಂಬಕ್ಕೆ ಸೇವೆ ಮಾಡುವ ಶಕ್ತಿ ನೀಡಿದೆ. ನಮ್ಮ ಕುಟುಂಬ ಸೇವೆ ಮೂಲಕ ಜನತೆಗೆ ಧಾರೆ ಎರೆಯುತ್ತಿದೆ ಎಂದರು.