ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ತೆರಳಿದ ಎಸ್.ಐ.ಟಿ ತಂಡ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಆ.26ರಂದು ಸ್ಥಳ ಮಹಜರಿಗಾಗಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಸಾಕ್ಷಿ ದೂರುದಾರ ತಾನು ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದು, ಅದರಂತೆ ಎಸ್.ಐ.ಟಿ ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ತಿಮರೋಡಿ ಮತ್ತು ಅವರ ಸಹೋದರನ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25ರಂದು ಸರ್ಚ್ ವಾರೆಂಟ್ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಜೊತೆಯಲ್ಲಿ ಕರೆದುಕೊಂಡು ತಿಮರೋಡಿ ಮನೆಗೆ ತೆರಳಿದ್ದು, ಮಹಜರು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.