ಸುಳ್ಯ: ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಸುಳ್ಯ: ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಐವರ್ನಾಡು ಕೆಎಫ್ ಡಿಸಿಯ ರಬ್ಬರ್ ಫ್ಯಾಕ್ಟರಿ ಬಳಿ ಮಂಗಳವಾರ ವರದಿಯಾಗಿದೆ.

ಐವರ್ನಾಡಿನ ದರ್ಖಾಸ್ತು ರಬ್ಬರ್ ಫ್ಯಾಕ್ಟರಿ ಬಳಿಯ ನಿವಾಸಿ ವಿಜಯಕಾಂತ ಎಂಬವರ ಪುತ್ರ ಕೌಶಿಕ್ ಕುಮಾರ್ (15ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಸುಳ್ಯದ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿದ್ದ ಕೌಶಿಕ್
ಕುಮಾರ್ ಮನೆ ಸಮೀಪದ ಸಾರ್ವಜನಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಪೈಚಾರಿನ ಮುಳುಗು ತಜ್ಞರು ಬಂದು ಬಾವಿಯಿಂದ ಮೃತದೇಹವನ್ನು ಮೇಲೆತ್ತಿದ್ದು, ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮಹಜರು ನಡೆಸಲಾಯಿತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.