ಆರೆಸ್ಸೆಸ್ ಗೀತೆ ಹಾಡಿ ಕ್ಷಮೆ ಕೋರಿದ ಡಿ.ಕೆ.ಶಿವಕುಮಾರ್: ವಿಪಕ್ಷಗಳಿಂದ ವಾಗ್ದಾಳಿ
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಆರೆಸ್ಸೆಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಕೋರಿದ್ದು, ಇದಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ, ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದ್ದಾರೆ.
ಇದೇ ವಿಚಾರವಾಗಿ ಜೆಡಿಎಸ್ ಪ್ರತಿಕ್ರಿಯಿಸಿದ್ದು, ಡಿ.ಕೆ.ಶಿವಕುಮಾರ್ ಅಧಿಕಾರ ಉಳಿಸಿಕೊಳ್ಳಲು, ಉಚ್ಚಾಟನೆಯಿಂದ ಪಾರಾಗಲು ಕ್ಷಮೆಯಾಚಿಸಿದ್ದಾರೆ. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಆದರೆ, ಕಾಂಗ್ರೆಸ್‌ನಲ್ಲಿ ಎರಡು ನ್ಯಾಯ ಇದೆ ಎಂದು ಟೀಕಿಸಿದೆ.