ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆ ನಡೆಯುತ್ತಿರುವಾಗ ಬೇರೆ ತನಿಖೆಯ ಅಗತ್ಯವಿಲ್ಲ: ಸಿಎಂ
ಮೈಸೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮಾಡುತ್ತಿದ್ದು, ಬೇರೆ ತನಿಖೆ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಅಧಿಕಾರದಲ್ಲಿದ್ದಾಗ ಸಿಬಿಐಗೆ ಯಾವ ಪ್ರಕರಣವನ್ನು ಕೊಟ್ಟಿದ್ದಾರೆ? ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ಹೇಳಿದರು.
ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ ಹೋದರೆ ಹೋಗಲಿ.ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಬಿಜೆಪಿಯವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸತ್ಯ ಹೊರಬರಬೇಕೆಂಬ ಕಾರಣದಿಂದ ಎಸ್‌ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತ್ತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.