ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 600ಕ್ಕೂ ಅಧಿಕ ಮಂದಿ ಸಾವು
ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೂಕಂಪದಲ್ಲಿ 600ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳೀಯ ಕಾಲಮಾನ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ, 34.50N ಅಕ್ಷಾಂಶ ಮತ್ತು 70.81E ರೇಖಾಂಶದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಭೂಕಂಪದಿಂದ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣವಾಗಿ ನೆಲಸಮಗೊಂಡಿವೆ. ಇನ್ನೂ ಹಲವಾರು ಹಳ್ಳಿಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೇ ಗ್ರಾಮದಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆ. ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.