ರಾಜ್ಯ

ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.



“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ“ ಎಂಬ ಕುಸುಮಾವತಿಯವರ ಮಾತಿಗೆ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ?
ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ. ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು?
ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ. ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ?
ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು “ಧರ್ಮಸ್ಥಳದಿಂದ ವಾಪಸ್ ಚಲೋ“ ಕಾರ್ಯಕ್ರಮ ಮಾಡಬೇಕಿತ್ತು ಎಂದು ಖರ್ಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!