ರಾಜ್ಯ

ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಹಾಸನ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಾಗೂ  ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನ ನೀಡಿತು.

ಹಾಸನದ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು, ಮೈಸೂರು ಪೇಟ ತೊಡಿಸಿ, ಫಲಪುಷ್ಪ ನೀಡಿ ಸಾಂಪ್ರದಾಯಿಕವಾಗಿ ಆಹ್ವಾನ ನೀಡಿದರು.
ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯವರು ಉಪಸ್ಥಿತರಿದ್ದರು.‌

Leave a Reply

Your email address will not be published. Required fields are marked *

error: Content is protected !!