ಗಾಝಾ: ಇಸ್ರೇಲ್ ದಾಳಿಯಲ್ಲಿ 24 ಮಂದಿ ಮೃತ್ಯು, ಹಲವರಿಗೆ ಗಾಯ
ಗಾಝಾ: ಗಾಝಾದ್ಯಂತ ಮಂಗಳವಾರ ತಡರಾತ್ರಿಯಿಂದ ಬುಧವಾರ ಬೆಳಗ್ಗಿನವರೆಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ರಫಾ ನಗರದಲ್ಲಿ ಮಗು ಸೇರಿದಂತೆ ಕನಿಷ್ಠ 10 ಮಂದಿ, ದಕ್ಷಿಣ ಗಾಝಾದ ಇತರೆಡೆ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರ ಸಹಿತ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.