ನೇಪಾಳದಲ್ಲಿ ಪ್ರತಿಭಟನೆ ತೀವ್ರ, ಪ್ರಧಾನಿ ನಿವಾಸಕ್ಕೆ ಬೆಂಕಿ
ಕಠ್ಮಂಡು: ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ ಎಂದು ವರದಿಯಾಗಿದೆ.

ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ತಮ್ಮ ಆಕ್ರೋಶ, ಪ್ರತಿಭಟನೆ ಮುಂದುವರಿಸಿದ್ದು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್ ಭವನವನ್ನು ಹಾನಿಗೊಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಕಾರ್ಯಾಚರಣೆಗೆ ಇಳಿದಿದೆ. ದೇಶದಲ್ಲಿ ಪ್ರತಿಭಟನೆ ಹಿಂಸಾಚಾರ ಭುಗಿಲೇಳುತ್ತಿರುವ ಹಿನ್ನೆಲೆಯಲ್ಲಿ ಹಲವು ಸಂಸದರ ರಾಜೀನಾಮೆ ಪರ್ವ ಆರಂಭವಾಗಿದ್ದು ಈ ನಡುವೆ ಪ್ರಧಾನಿ ಕೆಪಿ ಶರ್ಮಾ ಓಲಿ ವಿದೇಶಕ್ಕೆ ಹಾರಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.