ಕರಾವಳಿಕ್ರೀಡೆ

ಪಾಪೆಮಜಲು ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ


ಪುತ್ತೂರು: ಪುತ್ತೂರು ಗ್ರಾಮಾಂತರ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ.9ರಂದು ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು  ದೈಹಿಕ, ಮಾನಸಿಕ ಸಮತೋಲನಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಹೇಳಿದರು



ಶಾಲಾ ಮುಖ್ಯಗುರು ಮೋನಪ್ಪ ಬಿ ಪೂಜಾರಿ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಎಸ್‌ಡಿಎಂಸಿ ಸದಸ್ಯರಾದ ಹೊನ್ನಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ಚಂದ್ರ, ರೇವತಿ, ದಾನಿ ರಮೇಶ್ ಪರ್ಪುಂಜ, ಸಾಮಾಜಿಕ ಮುಂದಾಳು ಬಶೀರ್ ಕೌಡಿಚ್ಚಾರು ಉಪಸ್ಥಿತರಿದ್ದರು.



ಮದ್ಯಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಪತ್ರಕರ್ತ ಯೂಸುಫ್ ರೆಂಜಲಾಡಿ ಮಾತನಾಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಪತ್ರಕರ್ತ ಸಿ.ಶೇ ಕಜೆಮಾರ್ ಬಹುಮಾನ ವಿತರಿಸಿದರು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಸ್‌ಡಿಎಂಸಿ ಸದಸ್ಯರಾದ ಲೀಲಾವತಿ, ಭಾಗಿರಥಿ ಹಾಗೂ ಗ್ರಾಮಾಂತರ ವಲಯದ ದೈ.ಶಿ.ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಮೋನಪ್ಪ ಬಿ ಪೂಜಾರಿ ಸಮಾರೋಪ ಭಾಷಣ ಮಾಡಿದರು. ಸಂಸ್ಥೆಯ ದೈ.ಶಿ ಶಿಕ್ಷಕಿ ಪ್ರವೀಣಾ ರೈ ಬಿ ಬಹುಮಾನ ವಿಜೇತರ ಪಟ್ಟಿ ವಾಚಿಸಿ ವಂದಿಸಿದರು.
ಶಿಕ್ಷಕಿ ಸವಿತಾ ಪಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರಾದ ಪೂರ್ಣಿಮಾ ಶೆಟ್ಟಿ, ಹರಿಪ್ರಸಾದ್ ಕೆ, ಪ್ರೀತಾ ಟಿ ಎಂ, ಶಾಲೆಟ್ ಜೇನ್ ರೆಬೆಲ್ಲೊ, ಹರಿಣಾಕ್ಷಿ ಕೆ ಉಪಸ್ಥಿತರಿದ್ದು ಸಹಕರಿಸಿದರು. ಹನೀಫ್ ಅರಿಯಡ್ಕ ಅವರು ಬಹುಮಾನಗಳ ಪ್ರಾಯೋಜಕರಾಗಿ ಸಹಕರಿಸಿದರು.



ಪಂದ್ಯಾಟದ ಫಲಿತಾಂಶ:

ಥ್ರೋ ಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಹಾಗೂ ಇರ್ದೆ ಉಪ್ಪಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಂಡ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಯಿತು.

17ರ ವಯೋಮಾನದ ಬಾಲಕರ ವಿಭಾಗದಲ್ಲಿ ನೆ.ಮುಡ್ನೂರು ಸರಕಾರಿ ಪ್ರೌಢಶಾಲಾ ತಂಡ ಪ್ರಥಮ ಸ್ಥಾನ ಹಾಗೂ ಈಶ್ವರಮಂಗಲ ಹನುಮಗಿರಿ ಗಜಾನನ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಯಿತು.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ನೆ.ಮುಡ್ನೂರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!