ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಗುರುವಾರ ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ಬಂಧಿಸಿದ್ದಾರೆ. ನಿಯಾಜ್ ಯಾನೆ ನಿಯಾ ಬಂಧಿತ ಆರೋಪಿ.
ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 13 ಪ್ರಕರಣಗಳು ದಾಖಲಾಗಿದ್ದು, ವಿವಿಧ ನ್ಯಾಯಾಲಯಗಳಲ್ಲಿ ಈತನ ವಿರುದ್ದ ವಾರೆಂಟ್ ಹೊರಡಿಸಲಾಗಿತ್ತು.