ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಬಿಜೆಪಿಯಿಂದ ಜನರ ದಿಕ್ಕು ತಪ್ಪಿಸುವ ಕೆಲಸ: ಹರೀಶ್ ಕುಮಾರ್ ಆರೋಪ
ಮಂಗಳೂರು ಕೆಂಪು ಕಲ್ಲುಗಣಿಗಾರಿಕೆಯ ಸಮಸ್ಯೆ ಸರಿಪಡಿಸಲು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಕ್ರಮ ಕೈಗೊಂಡ ಬಳಿಕ ಬಿಜೆಪಿಯ ಶಾಸಕರು ಸೇರಿ ಪ್ರತಿಭಟನೆ ನಡೆಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೆಂಪು ಕಲ್ಲುಗಣಿಗಾರಿಕೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಅವರಿಗೆ ಜನರ ಬಗ್ಗೆ ಪ್ರಾಮಾಣಿಕ ಕಾಳಜಿಯಿಲ್ಲ ಎಂದು ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಸಂಸದರು ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡುವ ಬದಲು ಸಿಆರ್ಝಡ್ ನಿಯಮ ಸಡಿಲಗೊಳಿಸಲು ಪ್ರಯತ್ನಮಾಡಬಹುದಿತ್ತು ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಗಳಿಂದ ವಾಹನ ಸವಾರರು ಪರದಾಡುವಂತಾಗಿದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರದಿಂದ ಆಗಿಲ್ಲ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಪದ್ಮರಾಜ್, ಶಶಿಧರ ಹೆಗ್ಡೆ , ಮುಹಮ್ಮದ್ ಮೋನು, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ ಉಪಸ್ಥಿತರಿದ್ದರು.