ಮೂರು ದಿನದೊಳಗೆ ಕಂಬಳಕ್ಕೆ 50 ಲಕ್ಷ ರೂ ಬಿಡುಗಡೆ: ಅಶೋಕ್ ರೈ
ಪುತ್ತೂರು: ಮುಂದಿನ ಮೂರು ದಿನದೊಳಗೆ ಕಂಬಳಕ್ಕೆ ರೂ 50 ಲಕ್ಷ ಬಿಡುಗಡೆಗೊಳಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಭರವಸೆ ನೀಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಶುಕ್ರವಾರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ತುಳುನಾಡಿನ ಜನಪದ ಕ್ರೀಡೆ ಕಂಬಳಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅನುದಾನ ನೀಡುವುದಾಗಿ ಘೋಷಣೆಯನ್ನು ಮಾಡಿತ್ತು. ಈ ಅನುದಾನವನ್ನು ತಕ್ಷಣ ನೀಡುವ ಮೂಲಕ ಕಲೆಗೆ ಪ್ರೋತ್ಸಾಹ ನೀಡುವಂತೆ ಕೇಳಿಕೊಂಡರು. ಮನವಿಗೆ ಸ್ಪಂದಿಸಿದ ಸಚಿವರು ಮೂರು ದಿನದೊಳಗೆ ರೂ 50 ಲಕ್ಷ ಬಿಡುಗಡೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.