ಕೆಪಿಸಿಸಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮೂಸಕುಂಞಿ ಪೈಂಬೆಚ್ಚಾಲ್ ನೇಮಕ
ಸುಳ್ಯ: ಕೆಪಿಸಿಸಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಂ. ಮೂಸಕುಂಞಿ ಪೈಂಬೆಚ್ಚಾಲ್ ನೇಮಕಗೊಂಡಿದ್ದಾರೆ.

ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಡಾ.ಅಭಿಷೇಕ್ ಮನು ಸಿಂಘ್ವಿ ಅವರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ನೇಮಕಾತಿ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.