ಆಮ್ಲೆಟ್ ಗಂಟಲಿನಲ್ಲಿ ಸಿಲುಕಿ ವ್ಯಕ್ತಿ ಸಾವು
ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ.

ಸೆ.21ರಂದು ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರಲ್ಲಿ ಅವರು ತಲುಪುವ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿನ್ಸೆಂಟ್ ವೆಲ್ಡಿಂಗ್ ಅಂಗಡಿಯಲ್ಲಿ ಉದ್ಯೋಗಿಯಾಗಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ, ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.
ಬದಿಯಡ್ಕ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಅವಿವಾಹಿತರು ಎನ್ನಲಾಗಿದೆ.