ಶ್ರೀಕೃಷ್ಣನೇ ಮಗುವಿನ ತಂದೆ ಎಂದು ಡಿ.ಎನ್.ಎ ವರದಿಯಿಂದ ಸಾಬೀತಾಗಿದೆ-ಕೆ.ಪಿ ನಂಜುಂಡಿ
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿ.ಎನ್.ಎ. ಪರೀಕ್ಷೆ ವರದಿ ಬಂದಿದೆ. ವರದಿಯಲ್ಲಿ ಮಗುವಿನ ಮತ್ತು ಬಿಜೆಪಿ ನಾಯಕನ ಪುತ್ರ ಆರೋಪಿ ಶ್ರೀ ಕೃಷ್ಣನ ರಕ್ತದ ಮಾದರಿ ಹೊಂದಿಕೆಯಾಗಿದ್ದು, ಆತನೇ ಮಗುವಿನ ತಂದೆ ಎಂಬುದು ಸ್ಪಷ್ಟಗೊಂಡಿದೆ. ಎಂದು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಡಿಎನ್ ಎ ಪರೀಕ್ಷೆ ವರದಿ ಬಂದಿದೆ, ಸಂತ್ರಸ್ತೆಯ ಮಗುವಿನ ಅಪ್ಪ ಶ್ರೀಕೃಷ್ಣ ಜೆ. ರಾವ್ ಎಂದು ಸಂತ್ರಸ್ತೆಯ ಮನೆಯವರಿಗೆ ಮಾಹಿತಿಯನ್ನು ತಿಳಿಸಲಾಗಿದೆ ಎಂದು ಕೆ.ಪಿ.ನಂಜುಂಡಿ ಹೇಳಿದ್ದಾರೆ. ನಮ್ಮ ಸಮಾಜದ ಬಡ ಹೆಣ್ಣು ಮಗಳಿಗೆ ಅನ್ಯಾಯ ಆಗಿದ್ದು ನ್ಯಾಯ ಸಿಗಬೇಕಾಗಿದೆ ಎಂದ ಅವರು
ಜಗನ್ನಿವಾಸ ರಾವ್ ಪುತ್ರ ಶ್ರೀ ಕೃಷ್ಣ ಜೆ. ರಾವ್ ಸಂತ್ರಸ್ತೆಯನ್ನು ವಿವಾಹವಾಗಬೇಕು ಎಂದರು. ಪತ್ರಿಕಾಗೊಷ್ಟಿಯಲ್ಲಿ ಸಂತ್ರಸ್ತೆಯ ತಾಯಿ ಹಾಗೂ ಸಂಘದ ಪ್ರಮುಖರು ಇದ್ದರು.