ಬಿಹಾರ ವಿಧಾನಸಭಾ ಚುನಾವಣೆಗೆ ಇಂದು ಸಂಜೆ ದಿನಾಂಕ ಘೋಷಣೆ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು (ಅ.6) ಸಂಜೆ ಪ್ರಕಟಿಸಲಿದೆ.

ಚುನಾವಣಾ ಆಯೋಗವು ಬಿಹಾರದಲ್ಲಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿ, ಮುಕ್ತ, ನ್ಯಾಯಸಮ್ಮತ ಮತ್ತು ಸುಗಮ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.
243 ಸದಸ್ಯ ಬಲದ ರಾಜ್ಯ ವಿಧಾನಸಭೆಯ ಅವಧಿ ನವೆಂಬರ್ 22 ರಂದು ಕೊನೆಗೊಳ್ಳುತ್ತದೆ. ಮುಂಬರುವ ಚುನಾವಣೆಯು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮತ್ತು ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ನಡುವಿನ ನೇರ ಸ್ಪರ್ಧೆಯ ನಿರೀಕ್ಷೆಯಿದೆ.