ಕರಾವಳಿರಾಜ್ಯ

ಸರಕಾರಿ, ಅನುದಾನಿತ ಶಾಲೆಗಳಿಗೆ  ಅ.18ರವರೆಗೆ ರಜೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿ ಆದೇಶಿಸಿದೆ.



ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೆಲವು ಕಡೆ ಪೂರ್ಣಗೊಂಡಿಲ್ಲ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಅಕ್ಟೋಬರ್ 7 ರಂದು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಿದ್ದೇವು. ಆದರೆ, ನಿರೀಕ್ಷೆಯಂತೆ ರಾಜ್ಯದ ಹಲವೆಡೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ರಾಜ್ಯದಲ್ಲಿ 1.20 ಲಕ್ಷ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲು ದಸರಾ ರಜೆ ವಿಸ್ತರಣೆ ಮಾಡುವಂತೆ ರಾಜ್ಯ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಮನವಿ ಆಧಾರದ ಮೇಲೆ ರಜೆಯನ್ನು ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!