ಪುತ್ತೂರು: ರಸ್ತೆ ಅಪಘಾತ, ಗಾಯಾಳು ಮಹಿಳೆ ಮೃತ್ಯು
ಪುತ್ತೂರು: ಪುತ್ತೂರು ಮುರ ಜಂಕ್ಷನ್ ಎಂಬಲ್ಲಿ ಮೇ 27ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಕೆದಿಲ ನಿವಾಸಿ ಅಪೂರ್ವಾ ಕೆ. ಭಟ್ (32) ಮೃತಪಟ್ಟವರು.

ಪುತ್ತೂರು ಪೇಟೆಯಿಂದ ತಮ್ಮ ತಂದೆಯ ಜೊತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ ಪುತ್ತೂರಿನಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಖಾಸಗಿ ಬಸ್ ಕಾರಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿತ್ತು.
ಘಟನೆಯಲ್ಲಿ ಗಂಭೀರ ಗಾಯಗೊಂಡು 134 ದಿನಗಳ ಕಾಲ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಅಪೂರ್ವಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.



