ಕರಾವಳಿರಾಜ್ಯ

ನಾಳೆ ಸಿಎಂ ಸಿದ್ದರಾಮಯ್ಯ ಪುತ್ತೂರಿಗೆ

ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.20ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ.

ಪೂರ್ವಾಹ್ನ 11ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಮಧ್ಯಾಹ್ನ 12:10ಕ್ಕೆ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ಸ್ ಎಜುಕೇಶನಲ್ ಮತ್ತು ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಶೋಕ ಜನ-ಮನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ಮತ್ತು ಸಭೆ ನಡೆಸಲಿದ್ದು, ಸಂಜೆ 5:10ಕ್ಕೆ ಮಂಗಳೂರಿ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!