ಕರಾವಳಿ

ಅಶೋಕ ಜನಮನ’ ಕೃತಜ್ಞತಾ ಸಭೆ



ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆದ 13ನೇ ವರ್ಷದ ದೀಪಾವಳಿ ವಸ್ತ್ರ ವಿತರಣೆ ಕಾರ್ಯಕ್ರಮ ‘ಅಶೋಕ ಜನ-ಮನ’ ಈ ಬಾರಿ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಇದರ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಶಾಸಕ ಅಶೋಕ್ ರೈ ಹೇಳಿದರು.

ಶಾಸಕರ ಕಚೇರಿ ಸಭಾಭವನದಲ್ಲಿ ಅ.25ರಂದು ಅಶೋಕ ಜನಮನ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ ಟ್ರಸ್ಟ್ ಕಾರ್ಯಕರ್ತರಿಗೆ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು.

ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಮಾತನಾಡಿ, ಈ ಬಾರಿಯ ಅಶೋಕ ಜನಮನ ಅದ್ದೂರಿಯಾಗಿ ನಡೆದಿದೆ. ದೊಡ್ಡ ಕಾರ್ಯಕ್ರಮ ಮಾಡುವಾಗ ಸಣ್ಣಪುಟ್ಟ ಎಡವಟ್ಟು ಗಳು ಸಹಜ, ಮಳೆಯ ಅಬ್ಬರದ ನಡುವೆ ಕೆಲವು ಜನರಿಗೆ ಉಡುಗೊರೆ ಪಡೆಯಲು ಸಾಧ್ಯವಾಗಿಲ್ಲ. ಇದಕ್ಕೆ ನಮ್ಮ ವಿಷಾಧವಿದೆ, ಸ್ವಯಂ ಸೇವಕರ ಸಹಕಾರ ಹಾಗೂ ಟ್ರಸ್ಟ್ ಸದಸ್ಯರ ಬೆಂಬಲದಿಂದ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯವಾಗಿದೆ ಎಂದು ಹೇಳಿದರು.


ಟ್ರಸ್ಟ್‌ನ ನಿಹಾಲ್ ಪಿ. ಶೆಟ್ಟಿ, ನಿರಂಜನ್ ರೈ ಮಟಂತಬೆಟ್ಟು, ಯೋಗೀಶ್ ಸಾಮಾನಿಯವರು ಮಾತನಾಡಿ, ಕಾರ್ಯಕ್ರಮಕ್ಕೆ ಸಹಕಾರ ನೀಡಿದವರಿಗೆ ಅಭಿನಂದನೆ ಸಲ್ಲಿಸಿದರು.
ವೇದಿಕೆಯಲ್ಲಿ ಟ್ರಸ್ಟ್ ಸದಸ್ಯರಾದ ಕೃಷ್ಣಪ್ರಸಾದ್ ಆಳ್ವ, ಉಮಾನಾಥ ಶೆಟ್ಟಿ ಪೆರ್ನೆ, ಮುಹಮ್ಮದ್ ಬಡಗನ್ನೂರು, ಪದ್ಮನಾಭ ಪೂಜಾರಿ ಸಣ್ಣಗುತ್ತು, ಜಯಪ್ರಕಾಶ್ ಬದಿನಾ‌ರ್, ಕೃಷ್ಣಪ್ರಸಾದ್ ಭಟ್ ಬೊಳ್ಳಾವು, ರಾಮಣ್ಣಪಿಲಿಂಜ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!