ಕರಾವಳಿ

ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಗೆ ಬಿಗ್ ರಿಲೀಫ್

ಮಂಗಳೂರು: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ.



ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು.


ಇದರ ಬೆನ್ನಲ್ಲೇ ಪುತ್ತೂರು ಸೆಶನ್ಸ್ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಪ್ರಭಾಕರ ಭಟ್ ಪರವಾಗಿ ಅಪೀಲು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆ ದಿನಾಂಕದ ವರೆಗೆ ಬಲವಂತದ ಕ್ರಮ ಬೇಡವೆಂದು ಹೇಳಿ ಅ.29ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

error: Content is protected !!