ಪಾಣೆಮಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ, ಪುತ್ತೂರು ಕುದ್ಮಾರಿನ ಯುವಕ ಮೃತ್ಯು
ಬಂಟ್ವಾಳ: ಪಾಣೆಮಂಗಳೂರು ಫ್ಲೈ ಓವರ್ ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರು ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ.

ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫ್ಲೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24ವ) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದದೆ. ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.





