ಕರಾವಳಿ

ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ ಪಲ್ಟಿ: 20 ಮಂದಿಗೆ ಗಾಯ

ಬೆಳ್ತಂಗಡಿ: ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಮ್ಯಾಕ್ಸಿಕ್ಯಾಬ್ ಹಾಸನ‌ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಪಲ್ಟಿಯಾದ ಘಟನೆ ಅ.30ರಂದು ನಡೆದಿದೆ.

ಘಟನೆಯಿಂದ 20 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!