ಕರಾವಳಿ

ಮಧುರಾ ಶಾಲೆಯ ವಿದ್ಯಾರ್ಥಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ

ಪುತ್ತೂರು: ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಮಧುರಾ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಈಶ್ವರಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಸಿಸ್ಟರ್ ರಶ್ಮಿ ಅವರು ಆರೋಗ್ಯ, ಸ್ವಚ್ಛತೆ ಹಾಗೂ ವಿವಿಧ ವಿಭಾಗಗಳಲ್ಲಿ ಬಳಸುವ ಉಪಕರಣಗಳ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಹುಡುಗಿಯರಿಗಾಗಿ ಆರೋಗ್ಯ ಸಮಸ್ಯೆಗಳು ಮತ್ತು ದೌರ್ಜನ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರತ್ಯೇಕ ತರಗತಿಯೂ ಆಯೋಜಿಸಲಾಯಿತು.
ಈ ಭೇಟಿಯ ಮೂಲಕ ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಸಂಪಾದಿಸಿ ಇಂತಹ ಶೈಕ್ಷಣಿಕ ಚಟುವಟಿಕೆಯಲ್ಲಿ ಭಾಗಿಯಾಗುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.
ಅವರೊಂದಿಗೆ ಶಿಕ್ಷಕಿಯರಾದ  ಸುಸೇನಾ ಮತ್ತು  ಲಿಕ್ಷಿತಾ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!