ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ
ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿದ ಬಗ್ಗೆ ವರದಿಯಾಗಿದೆ.
ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ ಇದಕ್ಕೆ 9 ಮಂದಿ ಸೇರ್ಪಡೆಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪೊಲೀಸ್ ಆಯುಕ್ತರು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡಿದ್ದಾರೆ. ನಕಲಿ ಖಾತೆ ಸೃಷ್ಟಿಸಿದ ದುಷ್ಕರ್ಮಿ ತನ್ನ ಪ್ರೊಫೈಲ್ ಲಾಕ್ ಮಾಡಿರುವುದು ಕಂಡು ಬಂದಿದೆ.



