ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪ್ರತೀಕಾರಕ್ಕೆ ಪ್ರಚೋದಿಸುವ ಸಂದೇಶ ರವಾನಿಸಿದ ಆರೋಪ: ವಶಕ್ಕೆ
ಸಾಮಾಜಿಕ ಜಾಲತಾಣವಾದ Instagram ನ target_boy900 ಎಂಬ Instagram ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಶದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಿದ್ದು, ಈ ಬಗ್ಗೆ ದಿನಾಂಕ: 02.06.2025 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದ ತನಿಖೆ ನಡೆಸಲಾಗಿದ್ದು ದಿನಾಂಕ:08.11.2025 ರಂದು ಮಂಗಳೂರು ಕಸಬ ಬೆಂಗ್ರೆ ಮಹಮ್ಮದ್ ಮುನಾವರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.





