ಕರಾವಳಿಕ್ರೈಂ

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ:  ರಿಕ್ಷಾ ಚಾಲಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು


ಪುತ್ತೂರು: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ರಿಕ್ಷಾ ಚಾಲಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇಬ್ಬರು  ಬಾಲಕಿಯರು ಶಾಲೆಗೆ ತೆರಳುತ್ತಿದ್ದಾಗ, ಒಬ್ಬ ಅಪರಿಚಿತ ವ್ಯಕ್ತಿ ಆಟೋ ರಿಕ್ಷಾದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿರುವುದಾಗಿದೆ. ಮುಂದುವರಿದಂತೆ ದಿನಾಂಕ 8-11-2025 ರಂದು ಬೆಳಿಗ್ಗೆ, ಸದ್ರಿ ಬಾಲಕಿಯರು ಶಾಲೆಗೆ ಹೋಗುತ್ತಿದ್ದಾಗ, ಅದೇ ಅಪರಿಚಿತ ವ್ಯಕ್ತಿಯು ಆಟೊ ರಿಕ್ಷಾದಲ್ಲಿ ಬಂದು ಕಿರುಕುಳ ನೀಡಿದ್ದು, ಆಟೊ ರಿಕ್ಷಾ ಚಾಲಕನ ಬಗ್ಗೆ ಮಾಹಿತಿ ಪಡೆಯಲಾಗಿ ಆರೋಪಿ ಪ್ರಸಾದ್‌ ಎಂಬುದಾಗಿ ತಿಳಿದುಬಂದಿರುತ್ತದೆ.

ಈ ಬಗ್ಗೆ ದ.ಕ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 83/2025, ಕಲಂ: 78(2) BNS 2023 U/S :12 POCSO Act 2012 ರಂತೆ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!