ಕರಾವಳಿಕ್ರೈಂ

ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ಪೊಲೀಸರು

ಬಂಟ್ವಾಳ: ಮನೆಯ ಆವರಣದಲ್ಲಿರುವ ಶೆಡ್‌ ಬಳಿ  ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ನ.16ರಂದು ಬಂಟ್ವಾಳ ಗ್ರಾಮಾಂತರ ಠಾಣಾ  ಪಿಎಸ್‌ ಐ ರವರು ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದಾಗ, ಮನೆಯ ಬಳಿಯ ಶೆಡ್‌ ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ  ಮಾಂಸ ಮಾಡುತ್ತಿದ್ದು, ಪೊಲೀಸ್ ದಾಳಿ ವೇಳೆ ಇಬ್ಬರು ಪರಾರಿಯಾಗಿದ್ದಾರೆ.

ಮೈಯದಿ (57) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು  ಶೆಡ್‌ ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ 172/2022 ಕಲಂ 4,5,7,12  ಕರ್ನಾಟಕ  ಜಾನುವಾರು ಪ್ರತಿಬಂಧಕ  ಮತ್ತು ಸಂರಕ್ಷಣಾ  ಕಾಯಿದೆ 2020 ಕಲಂ 11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯಿದೆ ಹಾಗೂ ಕಲಂ 303(2)307  ಬಿಎನ್‌ ಎಸ್‌ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಬಂಧಿತ ಆರೋಪಿ  ಮೈಯದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್‌ ನಲ್ಲಿ ಕಸಾಯಿಖಾನೆಯನ್ನು  ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್‌ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ,  ಈತನ  ಮನೆ ಹಾಗೂ ಶೇಡ್‌ ನ  ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಸಹಾಯಕ ಆಯುಕ್ತರು  ಹಾಗೂ  ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!