ಕರಾವಳಿಕ್ರೈಂ

ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ: ಆರೋಪಿ ಸೆರೆ


ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನ.13ರಂದು ರಾತ್ರಿ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿ ಉಮೇಶ್ ಗೌಡ ಎಂಬಾತ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆರೋಪಿಯು ಹಲ್ಲೆ ನಡೆಸಿ, ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿ ಕಡಬ ನಿವಾಸಿ ಉಮೇಶ್ ಗೌಡ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!