ಕರಾವಳಿ

ಬೆಳ್ತಂಗಡಿ: ಆಟೊ ರಿಕ್ಷಾ ಪಲ್ಟಿ, ಬಾಲಕ ಮೃತ್ಯು, ಐದು ಮಂದಿಗೆ ಗಾಯ



ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು, ಐವರು ಗಾಯಗೊಂಡ ಘಟನೆ ಲಾಯಿಲ ಕುತ್ತೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ನ.16ರಂದು ರಾತ್ರಿ ನಡೆದಿದೆ.

ಆಟೊ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕದ ತನ್ವಿತ್ (12) ಮೃತಪಟ್ಟ ಬಾಲಕ. ಆಟೊ ರಿಕ್ಷಾ ಪಲ್ಟಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ತನ್ವಿತ್ ರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು ಎನ್ನಲಾಗಿದೆ. ಐವರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!