ಸೌದಿ ಅರೇಬಿಯಾ: ಮದೀನಾಗೆ ಉಮ್ರಾ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಟ್ಯಾಂಕರ್ಗೆ ಡಿಕ್ಕಿ
ಮೆಕ್ಕಾದಿಂದ ಮದೀನಾಗೆ ಉಮ್ರಾ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್, ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಮಂದಿ ಭಾರತೀಯರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಮುಂಜಾನೆ ವರದಿಯಾಗಿದೆ.

ಮೃತರನ್ನು ಹೈದರಾಬಾದ್ ಮೂಲದವರು ಎನ್ನಲಾಗಿದ್ದು ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ನಲ್ಲಿದ್ದರು. ದುರಂತ ಸಂಭವಿಸಿದಾಗ ಹಲವು ಯಾತ್ರಿಕರು ನಿದ್ರೆಯಲ್ಲಿದ್ದರು ಎನ್ನಲಾಗಿದೆ. ಮೆಕ್ಕಾದಲ್ಲಿ ತಮ್ಮ ಧಾರ್ಮಿಕ ವಿಧಿಗಳನ್ನು ಮುಗಿಸಿದ ನಂತರ ಯಾತ್ರಿಕರು ಮದೀನಾಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿ ತುರ್ತು ಕಾರ್ಯಾಚರಣೆಗಳು ನಡೆಯುತ್ತಿದೆ.



