ಕಡಬ: ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ
ಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಿಂದ ವರದಿಯಾಗಿದೆ.

ಕಡಬ ತಾಲೂಕು ನೂಜಿಬಾಳ್ತಿಲ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಆಕೋಟ ನಿವಾಸಿ ಚೇತನ್ ಲಾರೆನ್ಸ್ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಡಬ ಸಮುದಾಯ ಆಸ್ಪತ್ರೆಯಲ್ಲಿ ಶವದ ಮಹಜರು ಮಾಡಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





