ಕ್ರೈಂರಾಜ್ಯ

5 ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ; ಬಾಲಕಿ ಮೃತ್ಯು


ಚಿಕ್ಕಮಗಳೂರು: ಚಿರತೆ ದಾಳಿಯಿಂದ 5 ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5.ವ) ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ


ಮನೆಯ ಹಿಂದೆ ಕೊಟ್ಟಿಗೆಯಲ್ಲಿದ್ದ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ಪೋಷಕರು ಬಂದಿದ್ದಾರೆ. ಅವರ ಎದುರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ ಎಂದು ತಿಳಿದುಬಂದಿದೆ. ಸ್ಥಳಿಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!