ಕರಾವಳಿ

ಗೂಡ್ಸ್ ವಾಹನದಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಸಾಮಾಗ್ರಿಗಳ ಸಾಗಾಟ:  ದಂಡ ವಿಧಿಸಿದ ಪೊಲೀಸರು

ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿ, ಅಪಾಯಕಾರಿಯಾಗಿ ಸಾಮಾಗ್ರಿಗಳನ್ನು  ಸಾಗಿಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದು, ಸದ್ರಿ ವಾಹನಕ್ಕೆ ಸಂಚಾರ ನಿಯಮದ ಅನ್ವಯ ಪೊಲೀಸರು ದಂಡ ವಿಧಿಸಿದ್ದಾರೆ.

ಜಿಲ್ಲೆಯ ಠಾಣಾ ವ್ಯಾಪ್ತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ವಾಹನ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆ, ವಾಹನ ಚಾಲನೆಯ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಇತರೆ ಅಗತ್ಯ ಮಾಹಿತಿಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!