ಕ್ರೀಡೆರಾಷ್ಟ್ರೀಯ

ಕಬಡ್ಡಿ ವಿಶ್ವ ಕಪ್ ಭಾರತದ ತೆಕ್ಕೆಗೆ

2025ರ ಮಹಿಳಾ ಕಬಡ್ಡಿ ಫೈನಲ್ ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಗೆಲುವು ಸಾಧಿಸಿದ್ದು, ಈ ಮೂಲಕ ಸತತ 2ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಭಾರತ ಫೈನಲ್ ನಲ್ಲೂ ಗೆಲುವು ಸಾಧಿಸುವ ಮೂಲಕ ಅಮೋಘ ಸಾಧನೆ ಮಾಡಿದೆ.

ಸೆಮಿಫೈನಲ್ ನಲ್ಲಿ ಭಾರತ 33-21ರಲ್ಲಿ ಇರಾನ್ ವಿರುದ್ಧ ಗೆಲುವು ಸಾಧಿಸಿತ್ತು. ಮತ್ತೊಂದೆಡೆ ಬಾಂಗ್ಲಾವನ್ನು ಮಣಿಸಿ ತೈಪೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತ್ತು. ಭಾರತ ಹಾಗೂ ಚೈನೀಸ್ ತೈಪೆ ತಂಡಗಳು ಗ್ರೂಪ್ ಹಂತದಲ್ಲಿ ಅಜೇಯ ಗೆಲುವಿನ ದಾಖಲೆಯನ್ನು ಕಾಯ್ದುಕೊಂಡಿದ್ದವು.

ಭಾರತ ತಂಡವು ‘ಎ’ ಗುಂಪಿನಲ್ಲಿ ಆಡಿರುವ ಎಲ್ಲ 4 ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿತ್ತು. ಚೈನೀಸ್ ತೈಪೆ ‘ಬಿ’ ಗುಂಪಿನಲ್ಲಿ ಎಲ್ಲ ಐದು ಪಂದ್ಯಗಳನ್ನು ಗೆದ್ದುಕೊಂಡಿತ್ತು.

ಮಹಿಳಾ ಕಬಡ್ಡಿ ಫೈನಲ್ ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಈ ಗೆಲುವು ದೇಶಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಕ್ಕಾಗಿ ನಮ್ಮ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಅಭಿನಂದನೆಗಳು. ಅವರು ಅತ್ಯುತ್ತಮ ಧೈರ್ಯ, ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದ್ದಾರೆ. ಅವರ ಗೆಲುವು ಅಸಂಖ್ಯಾತ ಯುವಕರಿಗೆ ಕಬಡ್ಡಿಯನ್ನು ಮುಂದುವರಿಸಲು, ದೊಡ್ಡ ಕನಸು ಕಾಣಲು ಮತ್ತು ಉನ್ನತ ಗುರಿಯನ್ನು ಸಾಧಿಸಲು ಸ್ಫೂರ್ತಿ ನೀಡುತ್ತದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!