ಕರಾವಳಿಕ್ರೈಂರಾಜ್ಯ

ಧರ್ಮಸ್ಥಳ: ಭಕ್ತಾದಿಗಳ ಬ್ಯಾಗ್‌ನಿಂದ ಚಿನ್ನಾಭರಣ ಕಳವು ಪ್ರಕರಣ,
ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ತಾಯಿ-ಮಗಳನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.



ಹುಬ್ಬಳಿ ನಗರದ ಸಟಲ್ಲೆಂಟ್ 2ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್ (59) ಮತ್ತು ಪುತ್ರಿ ಮಸಾಭಿ ಆರತಿ (34) ಬಂಧಿತ ಆರೋಪಿಗಳು.

ಆಂಧ್ರಪ್ರದೇಶ ರಾಜ್ಯದ ನೆಲ್ಲೂರು
ನಿವಾಸಿ ಜೆ.ಲತಾ ಮತ್ತು ಕುಟುಂಬ ಮೇ 3ರಂದು ಸಂಜೆ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದರು. ದರ್ಶನ ಮುಗಿಸಿ ಹಿಂತಿರುಗುವ ವೇಳೆ ಅವರ ಬ್ಯಾಗ್‌ನಲ್ಲಿದ್ದ ಸುಮಾರು 6,79,000 ರೂ. ಮೌಲ್ಯದ 97 ಗ್ರಾಂ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಮೇ 4 ರಂದು ಜೆ.ಲತಾ ದೂರು ನೀಡಿದ್ದರು.


ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ಕಳೆದ ಐದು ತಿಂಗಳಿನಿಂದ ವಿವಿಧ ಆಯಾಮಗಳಲ್ಲಿ ತನಿಖೆ ಮಾಡುತ್ತಿರುವಾಗ ಆರೋಪಿಗಳಿಬ್ಬರು ವಿವಿಧ ಕಡೆ ಪ್ರಯಾಣ ಮಾಡಿಕೊಂಡು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುತ್ತಿದ್ದರು. ನ.23ರಂದು ಧರ್ಮಸ್ಥಳದ ದ್ವಾರದ ಬಳಿ ಮತ್ತೆ ಕಳ್ಳತನ
ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ನ.23ರಂದು ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ.24ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಐದು ದಿನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.


ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ರೂ. ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ಆರೋಪಿಗಳ ಹುಬ್ಬಳಿ ಮನೆಯಿಂದ ನ.25ರಂದು ಮಂಗಳವಾರ ಧರ್ಮಸ್ಥಳ ಪೊಲೀಸರು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಧರ್ಮಸ್ಥಳ ಪೊಲೀಸರು ನ.26ರಂದು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ  ವೃತ ನಿರೀಕ್ಷಕರು ಬಿ ಜಿ ಸುಬ್ಬಪುರ್ ಮಠ್ ರವರ ತಂಡದಲ್ಲಿ  ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಸಮರ್ಥ್ ಆರ್ ಗಾಣಿಗೇರ, ಸಿಬ್ಬಂದಿ ಹೆಚ್ ಸಿ 607 ರಾಜೇಶ್, ಹೆಚ್ ಸಿ 1016 ಪ್ರಶಾಂತ್, ಹೆಚ್ ಸಿ 862 ಸಂದೀಪ್, ಪಿಸಿ 2293 ಮಲ್ಲಿಕಾರ್ಜುನ್, ಪಿಸಿ 2522 ಶಶಿಕುಮಾರ್, ಪಿಸಿ 441 ಮಂಜುನಾಥ್ ಪಾಟೀಲ್, ಮಹೆಚ್ ಸಿ 731 ಪ್ರಮೋದಿನಿ, ಮಹೆಚ್ ಸಿ 904ಸುನಿತಾ, ಮಪಿಸಿ 1954 ಸೌಭಾಗ್ಯ, ಮಪಿಸಿ 514 ದೀಪಾ, ಮಪಿಸಿ 515 ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!