ಕಾಪು: ಗೂಡ್ಸ್ ಟೆಂಪೋ ಪಲ್ಟಿ; ನಾಲ್ವರು ದಾರುಣ ಸಾವು
ಕಾಪು: ಗೂಡ್ಸ್ ಟೆಂಪೋವೊಂದು ಪಲ್ಟಿಯಾಗಿ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ಭಾನುವಾರ ಸಂಭವಿಸಿದೆ.

ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಏರಿ ರಸ್ತೆಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಒಟ್ಟು 9 ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 9 ಮಂದಿ ಕೆಲಸಗಾರರ ಪೈಕಿ ನಾಲ್ವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.




