ಕರಾವಳಿರಾಜ್ಯ

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ವಕೀಲರ ನಿಯೋಗ: ಹೈಕೋರ್ಟ್ ಮುಖ್ಯ ನ್ಯಾಯಾಧೀಶರಲ್ಲಿ ಚರ್ಚಿಸಿ ನಿರ್ಧಾರ ಸಿಎಂ ಭರವಸೆ


ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರೂ, ವಕೀಲರು ಆದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ, ಜಿಲ್ಲೆಯ ವಕೀಲರ ನಿಯೋಗವು ಡಿ.3ರಂದು ಮಂಗಳೂರಿನ ಸರ್ಕ್ಯೂಟ್ ಹೌಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.


ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು, ಕರಾವಳಿ ಭಾಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ, ಹೈಕೋರ್ಟ್ ಪೀಠ ಮಂಗಳೂರಿನಲ್ಲಿ ಆರಂಭಿಸುವುದು ಅತಿ ಅಗತ್ಯವಾಗಿರುವುದನ್ನು ನಾನು ಮನಗಂಡಿರುತ್ತೇನೆ. ಈ ವಿಚಾರದಲ್ಲಿ ಕರ್ನಾಟಕದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.


ವಕೀಲರ ನಿಯೋಗದಲ್ಲಿ ಹಿರಿಯ ವಕೀಲರಾದ ಟಿ ಎನ್ ಪೂಜಾರಿ, ಎಂ ಆರ್ ಬಲ್ಲಾಳ್, ಯಶವಂತ ಮರೋಲಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ, ದ.ಕ.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಕೋಸ್ಟ, ನೂರುದ್ದೀನ್ ಸಾಲ್ಮರ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ. ಜಗನ್ನಾಥ ರೈ, ಉಪಾಧ್ಯಕ್ಷ ಮೋನಪ್ಪ, ಕಾರ್ಯದರ್ಶಿ ಚಿನ್ಮಯ ರೈ, ಜೊತೆ ಕಾರ್ಯದರ್ಶಿ ಮಮತಾ ಸುವರ್ಣ, ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಮಹಮ್ಮದ್ ಅಸ್ಕರ್ ಮಂಗಳೂರು ಹಾಗೂ ಕರಾವಳಿ ಜಿಲ್ಲೆಯ ವಿವಿಧ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!