ಕರಾವಳಿಕ್ರೈಂ

ಮಂಗಳೂರು: 50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ; ನಾಲ್ವರ ಬಂಧನ



ಮಂಗಳೂರು: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, 50 ಲಕ್ಷ ರೂ.ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಬೈಂದೂರು ನಾವು೦ದದ ಮುಹಮ್ಮದ್ ಶಿಹಾಬ್, ಉಳ್ಳಾಲ ನರಿಂಗಾನದ ಮುಹಮ್ಮದ್ ನೌಶಾದ್, ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್ ಯಾನೆ ಇಂಬ ಮತ್ತು ಬಂಟ್ವಾಳ ಬ್ರಹ್ಮರಕೂಟ್ಟುವಿನ ನಿಸಾರ್ ಅಹ್ಮದ್ ಬಂಧಿತ ಆರೋಪಿಗಳು.

ಡಿ.6ರಂದು ಮಂಗಳೂರು-ಉಡುಪಿ ರಾ.ಹೆ. ಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವೆನ್ಸನ್ ಹಾಲ್ ಬಳಿ ಆರೋಪಿಗಳು ಕಾರಿನಲ್ಲಿ ಮಾದಕ ವಸ್ತು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ ನೇತೃತ್ವದ ಪೊಲೀಸರ ತಂಡವು ದಾಳಿ ನಡೆಸಿದೆ. ಈ ವೇಳೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾದಕ ವಸ್ತುಗಳು ಪತ್ತೆಯಾಗಿದೆ. ಅವರ ಬಳಿ ಇದ್ದ ಸುಮಾರು 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ಕಾರು, ಹಾಗೂ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.




ಬೆಂಗಳೂರಿನಲ್ಲಿ ನೈಜೀರಿಯಾ ದೇಶದ ವ್ಯಕ್ತಿಯಿಂದ ಖರೀದಿಸಿ ಮಂಗಳೂರು ನಗರದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿರುತ್ತದೆ.

ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 124/2025 ಕಲಂ:22(ಸಿ), 21 (ಅ) ಎನ್‌ಡಿಪಿಎಸ್ ಕಾಯ್ದೆ ಜೊತೆಗೆ 3(5) ಬಿಎನ್‌ಎಸ್‌ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!