ಕರಾವಳಿಕ್ರೈಂ

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್:ಆರೋಪಿಯ ಬಂಧನ


ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾವನೆ ಉಂಟಾಗುವ ಪೋಸ್ಟ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಬಂಧಿತ ಆರೋಪಿ.



2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಪೋಸ್ಟ್ ಹಾಕಿದ್ದ. ಮೂಲತಃ ಮುಂಬೈಯ ಚಾರ್ಕೋಪ್ ನಿವಾಸಿಯಾಗಿದ್ದ ಈತನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಲುಕ್‌ ಔಟ್ ನೋಟಿಸ್ ಜಾರಿಗೊಳಿಸಿದ್ದರು.
ಆರೋಪಿ ಮುಂಬೈ ಸಹರಾ ವಿಮಾನ ನಿಲ್ದಾಣಕ್ಕೆ ಬಂದಿರುವ ಬಗ್ಗೆ ಇಮಿಗ್ರೇಶನ್ ಅಧಿಕಾರಿಗಳು ಮಾಹಿತಿ ನೀಡಿದ್ದರು. ಅದರಂತೆ ಡಿ.5ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಈತನ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ಈ ಪ್ರಕರಣದ ಇನ್ನೋರ್ವ ಆರೋಪಿ ಎವಿಜಿನ್ ಜಾನ್ ಡಿಸೋಜ (57) ಎಂಬಾತನನ್ನು 2024ರ ಆ.11ರಂದು ಬಂಧಿಸಲಾಗಿತ್ತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!