ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಮೃತ್ಯು
ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ವಿದ್ಯುತ್ ಆಘಾತಕ್ಕೀಡಾಗಿ ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ಎಂದು ಗುರುತಿಸಲಾಗಿದೆ.

ಇವರು ಮನೆಯ ಎದುರುಗಡೆಯ ತೆಂಗಿನ ಮರದಿಂದ ಅಲ್ಯುಮಿನಿಯಂ ಕೊಕ್ಕೆಯಿಂದ ಕಾಯಿಕೀಳುತ್ತಿದ್ದ ವೇಳೆ ಕೊಕ್ಕೆ ಆಕಸ್ಮಿಕವಾಗಿ ಪಕ್ಕದಲ್ಲಿರುವ ಎಚ್‌ಟಿ ಲೈನ್ ವಿದ್ಯುತ್ ತಂತಿಗೆ ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಇವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.



